Home / ಸಣ್ಣ ಕಥೆಗಳು

Browsing Tag: ಸಣ್ಣ ಕಥೆಗಳು

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲ...

“ಹಲೋ-ಸ್ವೀಟಿ-ಗುಡ್ ಮಾರ್‍ನಿಂಗ್-” ಡಾಕ್ಟರ್ ವಿಜಯಾ ಪ್ರೊಫೆಸರ್‍ಗೆ ವಿಶ್ ಮಾಡಿದಳು. ಆತ್ಮವಿಶ್ವಾಸದ, ಧೈರ್‍ಯ-ಆಸೆ ಭರವಸೆ ಹುಟ್ಟಿಸುವ ಪುಟ್ಟ ತೀಕ್ಷ್ಣವಾದ ಕಣ್ಣುಗಳ ಸ್ವಲ್ಪವೇ ಸ್ಥೂಲಕಾಯದ ಎತ್ತರದ ನಿಲುವಿನ ಮಧ್ಯ ವಯಸ್ಸು ದಾಟಿದ...

ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ ತಿರುಗಿ ನೋಡಿದ. ಅವಳು ಅವನ ಮುಖವನ್ನೇ ನೋಡುತ್ತಾ ನಿಂತಲ್ಲಿಯೇ...

ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. “ಪತಿಯೇ ದೇವರು” ಎನ್ನುವ ಸಾಂಪ್ರದಾಯಿಕ ಗೊಡ್ಡು ಸಂಸಾರದ...

ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. “ತಾನೇಕೆ ದುಡುಕಿಬಿಟ್ಟೆ? ತಾನು ...

ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. “ಮದರ್ ಕರೆಯುತ್ತಿದ್ದಾರೆ…” ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ ಎದೆ ಡವಗುಟ್ಟಿತು. ...

ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ ಮಾಡಿಕೊಂಡು ಹೊಡೆಯಲು ಹೋಗುತ್ತಿದ್ದಳು. ಅವನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...