Home / Ajjampura Sitaram

Browsing Tag: Ajjampura Sitaram

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್...

ಪೀಠಿಕೆ ನನ್ನ ಬಡಗುಡಿಸಲ ಹೆಸರು “ಆನಂದಕುಟೀರ”. ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು. ಹೃದಯವು ನಿರಾಶೆಯಿಂದ ಬಿರಿಯುತಿ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...