Home / Dr H Girijamma

Browsing Tag: Dr H Girijamma

ನನಗೂ ವಯಸ್ಸಾಯ್ತಲ್ಲ ಚಿನ್ನು… ಜೊತೆಗೆ ಈ ಮಾನಸಿಕ ‘ಖಿನ್ನತೆ’ ಬೇರೆ… ಹೀಗಾಗಿ ನಾನೆಲ್ಲೂ ಹೋಗುವುದೇ ಇಲ್ಲ. ಹೊರಗೊಂದು ಪ್ರಪಂಚವೊಂದಿದೆ ಎಂಬುದನ್ನು ಮರೆಯಲು ಯತ್ನಿಸುತ್ತಿದ್ದೇನೆ… ಯಾರಾದರೂ ನೋಡಲು ಮಾತನಾಡಲು...

ಅವ್ವ ತೀರಿಕೊಂಡ ನಂತರ ಆ ದೊಡ್ಡ ಮನೆಯಲ್ಲಿ ನಾನೊಬ್ಬಳೇ… ಊಹಿಸಿಕೋ… ಇಡೀ ದಿನ… ಇಡೀ ರಾತ್ರಿ ಅವ್ವನ ರೂಮಿನಲ್ಲಿಯೇ, ಮಂಚದ ಬಳಿಯೇ ಕುಳಿತುಬಿಡುತ್ತಿದ್ದೆ. ಅವ್ವನ ಬಟ್ಟೆಗಳು, ಸೀರೆಗಳನ್ನಪ್ಪಿಕೊಂಡು ಹುಚ್ಚಿಯಂತೆ ಅಳುತ್ತಿದ್ದ...

ಹೈದರಬಾದ್‌ನಿಂದ ಕಂಪನಿಯವರು Pace Maker ತಂದು ಕೊಡುತ್ತಿದ್ದರು. ಅವ್ವನ ಶಸ್ತ್ರಕ್ರಿಯೆ ಯಶಸ್ವಿಯಾಗಿತ್ತು. ನಾನು ಭಾವೋದ್ವೇಗದಿಂದ ಅತ್ತುಬಿಟ್ಟಿದ್ದೆ. ಬೆಂಗಳೂರಿನಲ್ಲಿದ್ದಾಗ ಇಷ್ಟು ಭಾವೋದ್ವೇಗಕ್ಕೊಳಗಾಗಿರಲಿಲ್ಲ. ಇದು ನನ್ನ ಬಂಧುಗಳು, ಅವ್ವನ...

ಚಿನ್ನೂ, ಅಷ್ಟಕ್ಕೂ ಏನನ್ನು ಹುಡುಕಿಕೊಂಡು ದಾವಣಗೆರೆಗೆ ಹಿಂದಿರುಗಿ ಹೊರಟಿದ್ದೆ? ಅವ್ವನ ಪ್ರೀತಿಯನ್ನು, ವಿಶ್ವಾಸವನ್ನು ಮರಳಿ ಪಡೆಯುವುದಕ್ಕಾ? ಕಳಚಿಕೊಂಡು ಹೋಗಿದ್ದ ಬಾಂಧವ್ಯದ ಕೊಂಡಿಗಳನ್ನು ಮತ್ತೆ ಒಂದುಗೂಡಿಸಿ ನಿಷ್ಕಲ್ಮಷ ಪ್ರೀತಿಯನ್ನು ಪಡೆ...

ಹಾಗೆಯೇ… ಸಂಗೀತವೆಂದರೆ ನನಗೆ ಪ್ರಾಣ. ಅದೂ ಹಳೆಯ Sorrowfull ಹಾಡುಗಳೆಂದರೆ ನನಗೆ ಇಷ್ಟವಾಗುತ್ತಿತ್ತು. ಅವುಗಳಲ್ಲಿ ಎಲ್ಲವನ್ನೂ ಸೆಳೆಯುವ ಮಾಧುರ್ಯವಿರುತ್ತದೆ. ಹಗಲು ನಾನು ಹಾಡು ಕೇಳುವ ಹಾಗಿರಲಿಲ್ಲ. ಅದು ಅವನಿಗೆ ಸಹ್ಯವಾಗುತ್ತಿರಲಿಲ್...

ಆ ಮಧ್ಯೆ ಹೃದಯಾಘಾತವೂ ಆಗಿತ್ತು. Angioplasty ಶಸ್ತ್ರಕ್ರಿಯೆಯನ್ನು ಮಾಡಿಸಿಕೊಂಡೆ. ಯಾರಿಗೂ ತಿಳಿಸಿರಲಿಲ್ಲ. ಒಬ್ಬಳೇ ಹೋಗಿ ಆಸ್ಪತ್ರೆಗೆ ದಾಖಲಾಗಿದ್ದೆ. ನರ್ಸ್‌ಗಳ ಸ್ನೇಹ, ಆಯಾಗಳ ವೈದ್ಯ ಸ್ನೇಹದಿಂದ ಶಸ್ತ್ರಕ್ರಿಯೆಯನ್ನು ಮಾಡಿಸಿಕೊಂಡು ಬಂದಿ...

ಚಿನ್ನೂ, ಹಿತೈಷಿಗಳು, ಸ್ನೇಹಿತರು, ಹತ್ತಿರದಿಂದ ಬಲ್ಲವರು ನನ್ನ ಬದುಕು, ನಾನು ಬದುಕಿದ ರೀತಿಗೆ ಹೋರಾಟವೆಂದುಕೊಂಡಿದ್ದರು. ಅಂತಹುದ್ದೇನು ಇರಲಿಲ್ಲ. ಅವರವರ ಬದುಕು ಅವರವರಿಗೆ ಹೋರಾಟವೆಂದೇ ಭಾಸವಾಗುತ್ತದೆ. ನಾನು ಯುದ್ಧ ಮಾಡಿದ ವೀರಳಲ್ಲ, ಯಾವ ಸ...

ಮಾರನೆಯ ದಿನ ಔಟ್‌ಪೇಶೆಂಟ್ ವಿಭಾಗದಲ್ಲಿ ರೋಗಿಗಳಿಂದ ನನಗೆ ಫೋನ್ ಬಂದಿತ್ತು. ನನಗೆ ‘ಆಕೆ’ಯದೇ ಫೋನ್ ಇರಬೇಕು ಎನ್ನಿಸಿತ್ತು. ರೆಸೆಪ್ಷನ್ ಕೌಂಟರ್‌ಗೆ ಬಂದು ಫೋನನ್ನು ಕೈಗೆತ್ತಿಕೊಂಡಿದ್ದೆ. “ಹಲೋ…” “ನಾನು ಮೇ...

ಚಿನ್ನೂ… ಇಷ್ಟೆಲ್ಲಾ ನಡೆದ ಮೇಲೂ ನನಗೆ ನಿದ್ದೆ ಬರಲು ಹೇಗೆ ಸಾಧ್ಯ ಹೇಳು? ಮಧ್ಯೆ ಮಧ್ಯೆ ರಾತ್ರಿಯ ವೇಳೆಯಲ್ಲೇ ಹೆಚ್ಚಾಗಿ ಬರುತ್ತಿದ್ದ ರೋಗಿಗಳು… ಹೆರಿಗೆ, ಸಿಝೇರಿಯನ್ ಶಸ್ತ್ರಕ್ರಿಯೆ, ಹೆಚ್ಚೇ ಇರುತ್ತಿತ್ತು. ಒಂದೊಂದು ದಿನಾ ಪ್...

ಕನಕಪುರಕ್ಕೆ ಬಂದ ನಂತರ ಯೋಚಿಸುವುದೊಂದೇ ನನ್ನ ಕೆಲಸವಾಗಿತ್ತು. ಯಾವ ಕೆಲಸವೂ ಅವನಿಗಿರಲಿಲ್ಲ. ಅಪ್ಪನ ಆಸ್ತಿಯಿದೆ. ದೊಡ್ಡ ಮನೆ, ದೊಡ್ಡ ತೆಂಗಿನ ತೋಟ, ಹೊಲ-ಗದ್ದೆಗಳು ಇದ್ದರೂ ಮೈ ಮುರಿದು ಯಾರೂ ದುಡಿಯುತ್ತಿರಲಿಲ್ಲ. ಅವನ ಇಬ್ಬರ ಅಣ್ಣಂದಿರು ಸಿಟ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...