Home / Keroora Vasudevacharya

Browsing Tag: Keroora Vasudevacharya

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆ...

ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ ತೆಗೆದುಕೊಂಡಿದ್ದರಿಂದ ನಮ್ಮಲ್ಲಿ ...

ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು ತಕ್ಕ...

[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ ಮನೋವೃತ್ತಿಗಳನ್ನು ಲಕ...

“Life is as tedious as a twice-told tale” ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು ತುಸು ಹೊರಬೀಸಾಗಿದ್ದು ಅದನ್ನು ವಾಯು ಸಂಚಾರಕ್ಕೆ ಅನುಕೂಲವಾಗಿರುವಂ...

ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ ಮಗಳಾದ ಲಲಿತಾ ಗೌರಿ...

“ಒಳ್ಳೇದು, ಅವನನ್ನು ಒಳಗೆ ಬರಹೇಳು” ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ ಗುಮಾಸ್ತನು, ನಿಂತಲ್...

ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ ಜನ ಕಾರ್‍ಯಧುರಂಧರರು ಇಂಗ್ಲಿಶ್ ಸರಕಾರ...

ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ ಔಷಧಾಲಯದ ಬಳಿಯಲ್ಲಿಯೇ ಇರುವದ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...